ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಲೂಟಿ ಮಾಡಿದ್ದ ಕಾರಣಕ್ಕೆ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗಿತ್ತು. ಸಿಬಿಐ, ಇಡಿ ಮತ್ತು ಸಿಐಡಿ ಅಧಿಕಾರಿಗಳು ನಾಗೇಂದ್ರ ವಿರುದ್ಧ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇದೀಗ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಏನಿತ್ತು? ಕಾಂಗ್ರೆಸ್ ಹೈಕಮಾಂಡ್ ಒತ್ತಡ ಏನಾದರೂ ಇತ್ತೆ? ಎಂದು ಕೇಳಿದರು.