ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Former CM Siddaramaiah ) ಅವರು ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ ವಂಚಿತರಿಗೆ ಮೀಸಲಾತಿ ಸಿಗಲೇಬೇಕು. ನಾವ್ಯಾರು ದಡ್ಡರಲ್ಲ, ಅವಕಾಶ ವಂಚಿತರು. ನಮ್ಮ ಬುದ್ಧಿವಂತಿಕೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಅವಕಾಶವನ್ನು ಮೀಸಲಾತಿ ವ್ಯವಸ್ಥೆ ನೀಡುತ್ತಿದೆ ಎಂದರು.