ಪರೀಕ್ಷಾ ಆಡಳಿತದಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ನಂಬಿಕೆಯನ್ನು ಮರುಸ್ಥಾಪಿಸಲು ತಂತ್ರಜ್ಞಾನವೇ ಮುಖ್ಯ ಅಸ್ತ್ರವಾಗಬೇಕು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ಉನ್ನತ ಮಟ್ಟದ ಸಮಿತಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಗುಪ್ತಚರ ಇಲಾಖೆಯ ನಿರ್ದೇಶಕ ತಪನ್ ಡೇಕಾ, ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ, ಶಾಲಾ ಶಿಕ್ಷಣ ಇಲಾಖೆಯ ಮಾಜಿ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನೊಳಗೊಂಡ ಪ್ರಮುಖ ತಜ್ಞರ ದಂಡೇ ಇದೆ. ಈ ಸಮಿತಿಯು ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ತಾಂತ್ರಿಕ ಮತ್ತು ರಚನಾತ್ಮಕ ಪರಿಹಾರಗಳನ್ನು ರೂಪಿಸಲಿದೆ.