೨೦೨೩ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿಗೆ ಇದ್ದ ವಿರೋಧ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಭರವಸೆಗಳು, ಸ್ಥಳೀಯವಾಗಿ ಬಿಜೆಪಿಯಲ್ಲಿದ್ದ ಆಂತರಿಕ ಭಿನ್ನಾಭಿಪ್ರಾಯ, ಬಂಡಾಯದ ಬಿಸಿ, ಬಿಜೆಪಿ ಸರ್ಕಾರ ಕೊನೆ ಗಳಿಗೆಯಲ್ಲಿ ಮೀಸಲಾತಿ ವಿಚಾರದಲ್ಲಿ ಮಾಡಿಕೊಂಡ ಗೊಂದಲ, ಒಳಮೀಸಲಾತಿ ಪೆಟ್ಟು, ಜಗದೀಶ ಶೆಟ್ಟರ, ಲಕ್ಷ÷್ಮಣ ಸವದಿ, ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಿದ್ದು ಎಲ್ಲವೂ ಸೇರಿಕೊಂಡು ಬಿಜೆಪಿ ಅಭ್ಯರ್ಥಿ ಸೋತಿದ್ದು ಬರೀ ೫೮೦೦ ಮತಗಳಿಂದ.