ತಮ್ಮ ಜಾತಿಯ ಅಭ್ಯರ್ಥಿ ಆದ ಕಾರಣ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಠಿಕಾಣಿ ಹೂಡಿದ್ದಾರೆ ಎನ್ನುವ ಯಡಿಯೂರಪ್ಪ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಅಲ್ಲೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದೇನೆ. ಅವರು ಯಾವ ಜಾತಿ ? ಎಂದು ಪ್ರಶ್ನಿಸಿದರು.ನಾವು ಜಾತಿ ಕಾರಣಕ್ಕೆ ಪ್ರಚಾರ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀವಿ ಎಂದರು.