ರಾಜಕಾರಿಗಳಿಗೆ ಇಚ್ಛಾಶಕ್ತಿ ಮುಖ್ಯ

Willpower is important for politicians.
Willpower is important for politicians.
Published on
ಶಿರಾ: ಯಾವುದೇ ದೇಶ ಅಭಿವೃದ್ಧಿಯಾಗಲು ಶಿಕ್ಷಣ ಮುಖ್ಯ. ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಬೇಕೆಂದು ಪ್ರತಿ ವರ್ಷ ಒಂದೊಂದು ಸರ್ಕಾರಿ ಶಾಲೆಗಳನ್ನು ಹೈಟೆಕ್​ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದ್ದೇನೆ ಎಂದು ವಿಧಾನಪರಿಷತ್​ ಸದಸ್ಯ ಚಿದಾನಂದ್​ ಎಂ.ಗೌಡ ಹೇಳಿದರು.
ವರ್ಷಕ್ಕೊಂದು ನೂತನ ಶಾಲಾ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಶಿರಾ ಶಿರಾ ನಗರದ ಸರ್ಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಮೊದಲ ಮಹಡಿಯ ನೂತನ ಕಟ್ಟಡ, ಕಂಪ್ಯೂಟರ್​ ಲ್ಯಾಬ್​, ಗ್ರಂಥಾಲಯ, ಪ್ರಯೋಗಾಲಯ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಗೃಹ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ರಾಜಕಾರಿಗಳಿಗೆ ಇಚ್ಛಾಶಕ್ತಿ ಮುಖ್ಯ. ಮುಂದಿನ ದಿನಗಳಲ್ಲಿ ಈ ಶಾಲೆಯನ್ನು ಕೆಪಿಸ್​ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ತುಮಕೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಆರ್ಶೀವಚನ ನೀಡಿ, ಚಿದಾನಂದ್​ ಎಂ.ಗೌಡ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಖಾಸಗಿ ಶಾಲೆಗಳನ್ನು ನಾಚಿಸುವ ರೀತಿಯಲ್ಲಿ ಶಾಲೆ ನಿರ್ಮಾಣ ಮಾಡಿ ನಿಜಾರ್ಥದಲ್ಲಿ ಜನಪ್ರತಿನಿಧಿಗಳಾಗಿದ್ದಾರೆ ಎಂದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್​.ಆರ್​.ಗೌಡ ಮಾತಾಡಿದರು. ಬಿಇಒ ಕೃಷ್ಣಪ್ಪ, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್​, ನಗರಸಭೆ ಸದಸ್ಯರಾದ ಅಂಬುಜಾ, ಉಮಾ ವಿಜಯರಾಜ್​, ಸುಶೀಲಾ ವಿರೂಪಾಕ್ಷ, ಮಾಜಿ ಸದಸ್ಯ ಸಂತೇಪೇಟೆ ನಟರಾಜ್​, ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ಹನುಮಂತರಾಜು, ತಾಪಂ ಮಾಜಿ ಸದಸ್ಯ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಈರಣ್ಣ ಪಟೇಲ್​, ಆರೋಗ್ಯ ರಾ ಸಮಿತಿ ಮಾಜಿ ಸದಸ್ಯ ಹನುಮಂತನಾಯ್ಕ ಹಾಗೂ ಮುಖಂಡರು, ಶಿಕ್ಷಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net