ಚಿಟಗುಪ್ಪ: ಬೀದರ್ ದಣ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಸುರಿದ ಭಾರೀ ಗಾಳಿ ಮಳೆಯಿಂದ ಬೃಹತ್ ಮರ ರಸ್ತೆ ಮಧ್ಯೆ ನೆಲಕ್ಕುರುಳಿದ ಪರಿಣಾಮ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡು ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ವಿಷಯ ತಿಳಿದ ತಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರವನ್ನು ತಣ ತೆರವುಗೊಳಿಸಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆಗೆ ಮುಂದಾದರು.