ಚಿಂತಾಮಣಿ: ಶಾಂತಿ ನಗರದ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಧನಲಕ್ಷಿ$್ಮ (35) ಎಂಬುವವರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಮನೆ ಮುಂಭಾಗದ ರಸ್ತೆ ಪಕ್ಕದಲ್ಲಿ ಮದ್ಯ ಮಾರುತ್ತಿದ್ದುದಲ್ಲದೆ ಸೇವಿಸಲು ಜಾಗ ಮಾಡಿಕೊಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ನಗರಠಾಣೆ ಪಿಎಸ್ಐ ಪ್ರಕಾಶ್, ಸಿಬ್ಬಂದಿ ಲೋಕೇಶ್ ಮತ್ತು ಪೇದೆ ಲ್ಮಕಾಂತಮ್ಮ ದಾಳಿ ನಡೆಸಿ ಬಂಧಿಸಿದ್ದಾರೆ.
6 ಒರಿಜಿನಲ್ ಚಾಯ್ಸ್ ವಿಸ್ಕಿ ಟೆಟ್ರಾ ಪ್ಯಾಕೆಟ್, 3 ಖಾಲಿ ಟೆಟ್ರಾ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.