ಸಾರಿಗೆ ಸಂಸ್ಥೆಯ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ಕುಣಿಗಲ್ ಡಿಪೋಗೆ ಸೇರಿದ ಬಸ್‌ನಲ್ಲಿ ಪ್ರಯಾಣ ಮಾಡಿ ಪಟ್ಟಣಕ್ಕೆ ಬಂದಿದ್ದ ಮಹಿಳೆ ಟಿಕೆಟ್ ವಿಚಾರಕ್ಕೆ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಸಮವಸ್ತ್ರ ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋವನ್ನು ನಿಲ್ದಾಣದಲ್ಲಿದ್ದವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದು ವೈರಲ್ ಆಗಿದೆ. ಕೊನೆಗೆ ಸಿಬ್ಬಂದಿಯೇ ಮಹಿಳೆ ಎಂಬ ಕಾರಣಕ್ಕೆ ಆಕೆಯನ್ನು ಕ್ಷಮಿಸಿ ಕಳುಹಿಸಿದ್ದಾರೆ.