ಬೆರಳಚ್ಚು ತಜ್ಞರು, ಸುಕೊ ತಂಡ, ತಾಂತ್ರಿಕ ಸಹಾಯಕ ತಂಡ ಹಾಗೂ ಡಿಸಿಪಿ ಡಿ.ಎಲ್ ನಾಗೇಶ್ ಸೇರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದ್ದು, ಯಾವ ಸಂದರ್ಭದಲ್ಲಿ ಸಾವು ಸಂಭವಿಸಿರಬಹುದು ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.