ಮಹಿಳಾ ಸಬಲೀಕರಣ, ಜನರ ಆರ್ಥಿಕ ಪ್ರಗತಿಯೇ ಸರ್ಕಾರದ ಗುರಿ

ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಶನಿವಾರ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಉದ್ಘಾಟಿಸಿದರು. ಸಚಿವ ಎನ್. ಎಸ್. ಬೋಸರಾಜು, ಗ್ಯಾರಂಟಿ ಯೋಜನಾ ರಾಜ್ಯ ಅಧ್ಯಕ್ಷ ಎಚ್. ಎಂ. ರೇವಣ್ಣ, ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ, ಸಂಸದ ಜಿ. ಕುಮಾರ ನಾಯಕ, ಶಾಸಕರಾದ ಹಂಪನಗೌಡ ಬಾರ್ದಲಿ, ಬಸನಗೌಡ ದದ್ದಲ್, ಆರ್. ಬಸನಗೌಡ ತುರ್ವಿಹಾಳ, ಎಂಎಲ್ಸಿಗಳಾದ ಎ. ವಸಂತಕುಮಾರ, ಬಸನಗೌಡ ಬಾರ್ದಲಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿಕೆ
  • ಫಲಾನುಭವಿಗಳಿಗೆ ನೇರ ಹಣ
ರಾಯಚೂರು: ರಾಜ್ಯದ ಪ್ರಗತಿ ಜತೆಗೆ ಜನರ ಆರ್ಥಿಕಮಟ್ಟ ಸುಧಾರಣೆಗೆ ಸರ್ಕಾರವು ಪಂಚ ಗ್ಯಾರಂಟಿಗಳನ್ನು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಉತ್ಸವದ ನಿಮಿತ್ತ ನಗರದ ಕೃಷಿ ವಿವಿಯ ಎರಡನೇ ವೇದಿಕೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಮಹಾನಗರ ಪಾಲಿಕೆಯಿಂದ ಶನಿವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವಾಗುತ್ತಿದೆ. ಮಹಿಳೆಯರ ಕೈಗೆ ಹಣ ಬಂದರೆ ಅವರ ಕುಟುಂಬ ಸುಧಾರಿಸುತ್ತದೆ. ಆದಾಯ ಹೆಚ್ಚಾದಂತೆ ಕುಟುಂಬದ ಅಭಿವೃದ್ಧಿ ಸಾಧ್ಯವಾಗುತ್ತದೆ. ಪ್ರತಿಯೊಬ್ಬರ ಆದಾಯ ಹೆಚ್ಚಾಗಬೇಕು ಎಂಬುದು ಸರ್ಕಾರದ ಉದ್ದೇಶ ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ 25 ತಿಂಗಳುಗಳನ್ನು ಪೂರೈಸಿದೆ. ಮಧ್ಯವರ್ತಿಗಳಿಲ್ಲದೆ ನೇರ ಫಲಾನುಭವಿಗಳಿಗೆ ತಲುಪಲು ಈ ಯೋಜನೆಗಳು ಸಹಕಾರಿಯಾಗಿವೆ ಎಂದರು.
ಜಾಗೃತಿ ಕರ್ನಾಟಕದ ಸಂಚಾಲಕ ಡಾ.ಬಿ.ಸಿ. ಬಸವರಾಜ ಉಪನ್ಯಾಸ ನೀಡಿ, ಗ್ಯಾರಂಟಿಗಳಿಂದ ಬೊಕ್ಕಸಕ್ಕೆ ಯಾವುದೇ ತೊಂದರೆಯಾಗಿಲ್ಲ, ಬದಲಾಗಿ ಅಭಿವೃದ್ಧಿಯಾಗಿದೆ. ಬೇರೆ ರಾಜ್ಯಗಳಲ್ಲಿಯೂ ಗ್ಯಾರಂಟಿಗಳು ಜಾರಿಯಾಗಿವೆ ಎಂದರು. ಸಚಿವ ಎನ್. ಎಸ್. ಬೋಸರಾಜು, ಗ್ಯಾರಂಟಿ ಯೋಜನಾ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ, ಸಂಸದ ಜಿ. ಕುಮಾರ ನಾಯಕ,
ಶಾಸಕರಾದ ಹಂಪನಗೌಡ ಬಾರ್ದಲಿ, ಬಸನಗೌಡ ದದ್ದಲ್, ಆರ್. ಬಸನಗೌಡ ತುರ್ವಿಹಾಳ, ಎಂಎಲ್ಸಿಗಳಾದ ಎ. ವಸಂತಕುಮಾರ, ಬಸನಗೌಡ ಬಾರ್ದಲಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಉಪಾಧ್ಯಕ್ಷ ನಾಗೇಂದ್ರಪ್ಪ ಮಟಮಾರಿ, ಹನುಮಂತಪ್ಪ ಜಾಲಿಬೆಂಚಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net