ಮಹಿಳಾ ಸಬಲೀಕರಣ ಜಾಗೃತಿ ಅವಶ್ಯ

ಸೇಡಂ ತಾಲೂಕಿನ ಆಡಕಿಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಸುರೇಖಾ ನಾಯ್ಕೋಡಿ, ವಿಜಯಲ್ಮ, ರೂಪಾ ಇತರರಿದ್ದರು.
ಸೇಡಂ ತಾಲೂಕಿನ ಆಡಕಿಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಸುರೇಖಾ ನಾಯ್ಕೋಡಿ, ವಿಜಯಲ್ಮ, ರೂಪಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸುರೇಖಾ ನಾಯ್ಕೋಡಿ ಹೇಳಿಕೆ
  • ಆಡಕಿಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ
ಸೇಡಂ: ಸರ್ಕಾರವು ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆ ಜಾರಿಗೆ ತಂದಿದ್ದು, ಅದರ ಸದುದ್ದೇಶಗಳನ್ನು ಅರ್ಥ ಮಾಡಿಕೊಂಡು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಸುರೇಖಾ ನಾಯ್ಕೋಡಿ ಹೇಳಿದರು.
ಆಡಕಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಗಾಗಿ ಸರ್ಕಾರಗಳು ಶ್ರಮಿಸುತ್ತಿವೆ. ಮಹಿಳೆಯರಿಗೆ ಶಿಕ್ಷಣ ಮತ್ತು ಕೌಶಲಗಳನ್ನು ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ ಎಂದರು.
ಯೋಜನೆ ಜಿಲ್ಲಾ ಸಂಯೋಜಕಿ ವಿಜಯಲ್ಮ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಸುಕನ್ಯಾ ಸಮೃದ್ಧಿ, ನಾರಿಶಕ್ತಿ ಉಜ್ವಲ ಯೋಜನೆ ಸೇರಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ಈ ಹಿನ್ನಲೆಯಲ್ಲಿ ಮಹಿಳೆಯರು ಯೋಜನೆಗಳ ಸದುಪಯೋಗ ಪಡೆದುಕೊಂಡು ಸಬಲೀಕರಣಗೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರಾದ ವಿಜಯಲ್ಮ, ರೂಪಾ ಮಠ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net