ಬೀದರ್: ಮಹಿಳೆಯರು ಉನ್ನತ ಸಾಧನೆಗೆ ಪ್ರಯತ್ನಿಸಬೇಕು ಎಂದು ಅಂತಾರಾಷ್ಟ್ರೀಯ ಪ್ರಕತಿ ಚಿಕಿತ್ಸಾ ಸಂಸ್ಥೆಯ ಜಿಲ್ಲಾ ಸಂಚಾಲಕಿ ಡಾ.ಮಂಜುಳಾ ಮುಚಳಂಬೆ ಹೇಳಿದರು.
ನಗರದ ಶಿವನಗರದಲ್ಲಿ ಸರೋಮಾ ಟ್ರಸ್ಟ್, ಸೂರ್ಯ ಫೌಂಡೇಶನ್ ಹಾಗೂ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಹಿಳೆಯರು ಯಾವ ಕ್ಷೇತ್ರದಲೂ ಪುರುಷರಿಗಿಂತ ಕಡಿಮೆ ಇಲ್ಲ ಎಂದು ತಿಳಿಸಿದರು.
ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಮಾನಸಿಕ ಒತ್ತಡ ನಿವಾರಣೆ ಹಾಗೂ ಸದಢ ಆರೋಗ್ಯ ಕಾಯ್ದುಕೊಳ್ಳಲು ಯೋಗ ಮತ್ತು ಧ್ಯಾನ ಮಾಡಬೇಕು ಎಂದು ತಿಳಿಸಿದರು.