ಸ್ವಾವಲಂಬಿ ಜೀವನಕ್ಕೆ ಕೌಶಲ ಮುಖ್ಯ

ಹೋಲಿಗೆ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಣೆ
ಹೋಲಿಗೆ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಣೆ
Published on

ಪ್ರಮುಖ ಮುಖ್ಯಾಂಶಗಳು

  • ಹೋಲಿಗೆ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ
  • ಬೆಳಗಾವಿ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮ
  • ವೇಗಾ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಹಯೋಗ

ಸ್ವಾವಲಂಬಿ ಜೀವನಕ್ಕೆ ಕೌಶಲ ಮುಖ್ಯ
| ಸಂಪನ್ಮೂಲ ಅಧಿಕಾರಿ ಸಮ್ರಿನ ಮುಲ್ಲಾ ಅಭಿಪ್ರಾಯ | ಪ್ರಮಾಣ ಪತ್ರ ವಿತರಣಾ ಸಮಾರಂಭ
ವಿಜಯವಾಣಿ ಸುದ್ದಿಜಾಲ ಬೆಳಗಾವಿ:

ಮಹಿಳೆಯರು ಸಮಾಜದಲ್ಲಿ ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಜೀವನ ನಡೆಸಲು ಕೌಶಲ ಅಭಿವೃದ್ಧಿ ತರಬೇತಿಗಳು ಅತೀ ಮುಖ್ಯ ಪಾತ್ರವಹಿಸುತ್ತವೆ ಎಂದು ವೇಗಾ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಸಮ್ರಿನ ಮುಲ್ಲಾ ಅಭಿಪ್ರಾಯಪಟ್ಟರು.
ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಕ್ವಾಲಿಟಿ ಎನಿಮಲ್ ಫೀಡ್ಸ್ ಪ್ರೈವೇಟ್ ಲಿಮಿಟೆಡ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈಚೆಗೆ ನಡೆದ ಹೊಲಿಗೆ ತರಬೇತಿಯ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಅವರು ನಡೆಸಿದರು.
ಮಹಿಳೆಯರಿಗೆ ಹಲವಾರು ಸಂಘ ಸಂಸ್ಥೆಗಳು ಕೌಶಲವೃದ್ಧಿ ತರಬೇತಿ ನೀಡುತ್ತವೆ. ಸರಿಯಾಗಿ ಸದುಪಯೋಗ ಪಡೆಸಿಕೊಂಡು ಉಜ್ವಲ ಜೀವನ ರೂಪಿಸಿಕೊಳ್ಳಬೇಕು.
ಕಂಪನಿಯ ಅಧಿಕಾರಿ ವಿನೋದ ಲಮಾಣಿ ಮಾತನಾಡಿ ವೇಗ ಕಂಪನಿಯಲ್ಲಿ ಉದ್ಯೋಗ ಅವಕಾಶಗಳಿವೆ. ಹೊಲಿಗೆ ತರಬೇತಿ ಪಡೆದು ಪ್ರಮಾಣ ಪತ್ರ ಪಡೆದವರು,ಕಂಪನಿಯಲ್ಲಿ ಉದ್ಯೋಗಕ್ಕೆ ಸೇರುವ ಆಸಕ್ತಿ ಇದ್ದರೆ ನಾವು ಪರಿಗಣಿಸಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಮಾತನಾಡಿ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಇಂತಹ ತರಬೇತಿಗಳು ಅತ್ಯಂತ ಉಪಯುಕ್ತವಾಗಿದೆ, ಮಹಿಳೆಯರು ತಮ್ಮ ಕೌಶಲವನ್ನು ಉದ್ಯೋಗ ಮತ್ತು ಸ್ವ-ಉದ್ಯೋಗಕ್ಕೆ ಬಳಸಿಕೊಳ್ಳುವಂತೆ ಕರೆ ಮಾಡಿ.
ಕರ್ನಾಟಕ ಪಬ್ಲಿಕ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಪ್ರಾಸ್ತಾವಿಕವಾಗಿ ನಡೆದಿದೆ.
ಮಹಾದೇವ ಬನ್ನೂರ, ಮಧು ರೋಖಡೆ,ದೀಪಾ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net