ತಾಲೂಕಿನ ಸಂಪಗಾವಿ ಗ್ರಾಮದ ಬೈಲಬಸವೇಶ್ವರ ದೇವಸ್ಥಾನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಹಿರೇಬಾಗೇವಾಡಿ ಯೋಜನಾ ಕಚೇರಿ ವ್ಯಾಪ್ತಿಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾನೀಯ ಎಂದರು. ಶ್ರೀ ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧಾರವಾಡದ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರ ಸಬಲೀಕರಣಕ್ಕೆ ಹಲವು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಂಟಿತರಾಗಿ ಆರ್ಥಿಕ ಸಬಲತೆ ಕಂಡುಕೊಳ್ಳಬೇಕೆಂದರು. ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಬಸವರಾಜ ನಾಯಕ, ವಕೀಲೆ ಉಮಾ ಬುಲಾಕೆ, ನ್ಯಾಯವಾದಿ ಸಂದ ಅಧ್ಯ ಎಂ.ಆರ್.ಮೆಳವಂಕಿ, ಹಿರಿಯ ವಕೀಲ ಎಂ.ಎಂ.ಸೋಪಿನ, ರಮೇಶ ಕುರಬರ, ಜಿಲ್ಲಾ ನಿರ್ದೇಶಕ ಸತೀಶ ನಾಯ್ಕ, ಹಿರೇಬಾಗೇವಾಡಿ ಯೋಜನಾಧಿಕಾರಿ ಯೋಗೇಶ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಸುನೀತಾ ಅಂಗಡಿ ಇತರರಿದ್ದರು.