ಪ್ರಪ್ರಥಮ ನಾಟಕೋತ್ಸವ ಯಶಸ್ಸಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ

ಸಭೆಯಲ್ಲಿ ಕಲಬುರಗಿ ರಂಗಾಯಣದ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಉಪನಿರ್ದೇಶಕಿ ಜಗದೀಶ್ವರಿ, ರಂಗಾಯಣ ಆಡಳಿತಾಧಿಕಾರಿ ಸಿದ್ದರಾಮ ಶಿಂಧೆ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಕಲಬುರಗಿ ನೆಕ್ಷ್ಟ್ ಫೌಂಡೇಷನ್ ಸದಸ್ಯ ಕಾರ್ಯದರ್ಶಿ ಅಬ್ದುಲ್ ಅಜೀಮ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಸಭೆಯಲ್ಲಿ ಕಲಬುರಗಿ ರಂಗಾಯಣದ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಉಪನಿರ್ದೇಶಕಿ ಜಗದೀಶ್ವರಿ, ರಂಗಾಯಣ ಆಡಳಿತಾಧಿಕಾರಿ ಸಿದ್ದರಾಮ ಶಿಂಧೆ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಕಲಬುರಗಿ ನೆಕ್ಷ್ಟ್ ಫೌಂಡೇಷನ್ ಸದಸ್ಯ ಕಾರ್ಯದರ್ಶಿ ಅಬ್ದುಲ್ ಅಜೀಮ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿ.ಫೌಜಿಯಾ ತರನ್ನುಮ್
ಕಲಬುರಗಿ: ರಂಗಚಟುವಟಿಕೆಗಳಿಗೆ ಪ್ರೋತ್ಸಾಹಿಸುವುದು ಮತು ಕಲಬುರಗಿ ನಗರವನ್ನು ಸಾಂಸ್ಕೃತಿಕ ನಗರವನ್ನಾಗಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಕಲಬುರಗಿ ನಗರದಲ್ಲಿ ಫೆಬ್ರವರಿ 21 ರಿಂದ 28ರ ವರೆಗೆ ಎಂಟು ದಿನಗಳ ಕಾಲ ಬೆಂಗಳೂರಿನ ರಂಗ ಶಂಕರ ಸಹಯೋಗದೊಂದಿಗೆ ಕಲಬುರಗಿ ನಾಟಕೋತ್ಸವ-2026 ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ಸೂಚನೆ ನೀಡಿದರು.
ಕಲಬುರಗಿ ನೆಕ್ಷ್ಟ್ ಫೌಂಡೇಷನ್ ಪ್ರಸ್ತುತಪಡಿಸುವ ಈ ನಾಟಕೋತ್ಸವ ಕಲಬುರಗಿ ರಂಗಭೂಮಿ ವಿಸ್ತಾರಕ್ಕೆ ದಿಕ್ಸೂಚಿಯಾಗಿರಲಿದೆ. ಸ್ಥಳೀಯ ರಂಗಕರ್ಮಿಗಳಿಗೆ ನಾಟಕದ ಅನೇಕ ಮಜಲುಗಳನ್ನು ಪರಿಚಯಿಸುವುದು ಮತ್ತು ಪ್ರೇಕ್ಷಕ ವೃಂದ ವಿಸ್ತಾರ ಮತ್ತು ಸ್ಥಳೀಯರಲ್ಲಿ ಕಲೆ, ಸಾಹಿತ್ಯ, ನಾಟಕ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ವಿನೂತನ ಪ್ರಯೋಗ ಇದಾಗಿದೆ. ದೇಶ-ವಿದೇಶದಲ್ಲಿ ಪ್ರದರ್ಶನ ನೀಡಿದ ಕಲಾವಿದರು ಮತ್ತು ಖ್ಯಾತ ನಾಟಕ ಸಂಸ್ಥೆಗಳು ಇಲ್ಲಿ ನಾಟಕ ಪ್ರಸ್ತುತ ಪಡಿಸಲಿದ್ದು, ಎಲ್ಲರು ಒಟ್ಟಾಗಿ ಕೆಲಸ ಮಾಡಿದಲ್ಲಿ ಕಲಬುರಗಿ ಜನರತ್ತ ರಂಗಭೂಮಿ ತೆಗೆದುಕೊಂಡು ಹೋಗಬಹುದಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆ.21 ರಂದು ಸಂಜೆ 5.30 ಗಂಟೆಗೆ ಡಾ.ಎ.ಎಂ.ಪಂಡಿತ್ ರಂಗಮಂದಿರದಲ್ಲಿ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಪ್ರತಿ ದಿನ ಸಂಜೆ 7 ಗಂಟೆಗೆ ವಯಸ್ಕರು ವೀಕ್ಷಿಸುವ ನಾಟಕ ಪ್ರದರ್ಶನವಾಗಲಿದ್ದು, ಇದಕ್ಕೆ ದರ ನಿಗದಿ ಮಾಡಲಾಗಿದೆ. ಅದೇ ರೀತಿ ಕಲಬುರಗಿ ರಂಗಾಯಣದಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಮಕ್ಕಳ ನಾಟಕ ಪ್ರದರ್ಶನ ಸಹ ಇರಲಿದೆ. ಇದಲ್ಲದೆ ರಂಗಕರ್ಮಿ, ರಂಗಾಸಕ್ತರಿಗೆ ನಾಟಕ, ರಂಗಭೂಮಿ ಇನ್ನು ಆಳವಾಗಿ ಅಭ್ಯಾಸ ಮಾಡಲು ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಾಟಕ ಸಂವಾದ ಸಹ ಆಯೋಜಿಸಿದೆ ಎಂದು ಡಿ.ಸಿ. ತಿಳಿಸಿದರು.
ನಾಟಕೋತ್ಸವದ ಹಿನ್ನೆಲೆಯಲ್ಲಿ ಡಾ.ಎಸ್.ಎಂ.ಪಂಡಿತ್ ರಂಗಮಂದಿರ, ಕಲಬುರಗಿ ರಂಗಾಯಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಮೂರು ಸ್ಥಳದಲ್ಲಿ ಪ್ರತಿನಿತ್ಯ ಕಾರ್ಯಕ್ರಮ ಸುಲಲಿತವಾಗಿ ಜರುಗುವಂತೆ ಪೂರ್ವಸಿದ್ಧತೆ ಕೈಗೊಳ್ಳಲು ಈಗಾಗಲೆ ಅಧಿಕಾರಿಗಳನ್ನೊಳಗೊಂಡ 7 ಸಮಿತಿಗಳನ್ನು ರಚಿಸಲಾಗಿದೆ. ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು. ಪ್ರತಿ ದಿನ ನಾಟಕ ಪ್ರದರ್ಶನ ಮುನ್ನ ಧ್ವನಿ-ಬೆಳಕು ವ್ಯವಸ್ಥೆ ಪರಿಶೀಲಿಸಬೇಕು. ಸಾರ್ವಜನಿಕರಿಗೆ ಕುಡಿಯವ ನೀರು ಪೂರೈಸಬೇಕು. ವಿದ್ಯುತ್ ಅಡೆತಡೆಯಾಗದಂತೆ ಎಚ್ಚರ ವಹಿಸಬೇಕು. ಎಲ್ಲೆಡೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಂಗಮಂದಿರದಲ್ಲಿ ನಾಟಕದ ಟಿಕೆಟ್ ಖರೀದಿಗೆ ಆನ್‌ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಕಲ್ಪಿಸಬೇಕು. ಪೊಲೀಸ್ ಭದ್ರತೆ ಕಲ್ಪಿಸಬೇಕು. ಮಕ್ಕಳ ನಾಟಕ ಪ್ರದರ್ಶನಕ್ಕೆ ಶಾಲಾ ಮಕ್ಕಳನ್ನು ಕರೆದುಕೊಂಡು ಬರಲು ಶಿಕ್ಷಕರನ್ನು ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net