ಸರ್ಜಾಪುರದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ / SARJAPUR

ಪಂಚ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸರ್ಜಾಪುರದ ನಾಲ್ವಡಿ ಕೃಷ್ಣರಾಜ ಒಡೆಯರ್​ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಸೋಂಪುರ ಪುನಿತ್​ ರೆಡ್ಡಿ, ಆನೇಕಲ್​ ತಾಲೂಕು ಬಿಜೆಪಿ ಉಪಾಧ್ಯಕ್ಷ ಯೋಗೇಶ್​ ರೆಡ್ಡಿ, ಮುಖಂಡರಾದ ಎಸ್​.ಆರ್​ ಗೋಪಾಲ ರೆಡ್ಡಿ, ಶ್ರೀಧರ್​, ಎಸ್​.ವಿ ಭರತ್​ ಗೌಡ, ಎಸ್​.ವೈ ಅನಿಲ್​ ರೆಡ್ಡಿ, ಜೆ.ಪಿ ಜಯಪ್ರಕಾಶ್​, ರಂಜೇಶ್​ ಇದ್ದರು.

Published on
ಸರ್ಜಾಪುರ : ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸರ್ಜಾಪುರದ ನಾಲ್ವಡಿ ಕೃಷ್ಣರಾಜ ಒಡೆಯರ್​ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಸೋಂಪುರ ಪುನಿತ್​ ರೆಡ್ಡಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ದೀರ್ಘಕಾಲದಿಂದ ಒಂದೇ ಪಕ್ಷದ ಆಡಳಿತದಿಂದ ಬೇಸತ್ತ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ ಎಂದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳ ವಿಚಾರದಲ್ಲಿ ಜನರಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಬಿಜೆಪಿ ಅರ್ಥಮಾಡಿಕೊಂಡು, ಮನೆಮನೆಗೆ ತಲುಪಿ ಜನರ ಸಮಸ್ಯೆ ಕೇಳಿ ಪರಿಹಾರ ನೀಡುವ ಭರವಸೆ ಮೂಡಿಸಿದೆ. ಹಾಗೆಯೇ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಪ್ರಧಾನಿ ಮೋದಿ ಅವರ ನಾಯಕತ್ವವು ಮತದಾರರಲ್ಲಿ ವಿಶ್ವಾಸ ಹೆಚ್ಚಿಸಿದೆ. ಪಕ್ಷದ ಸಂಘಟನಾ ಶಕ್ತಿ, ಕಾರ್ಯಕರ್ತರ ನಿರಂತರ ಪರಿಶ್ರಮ ಮತ್ತು ತಂತ್ರಜ್ಞಾನದ ಸಮರ್ಪಕ ಬಳಕೆ ಮೂಲಕ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದರು.
ಆನೇಕಲ್​ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್​ ರೆಡ್ಡಿ ಮಾತನಾಡಿ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ದಾಖಲಿಸಿದ ಭರ್ಜರಿ ಜಯ ಗಳಿಸಿದ್ದು, ಜನತೆ ಅಭಿವೃದ್ಧಿ, ಸ್ಥಿರ ಆಡಳಿತ ಮತ್ತು ರಾಷ್ಟ್ರದ ಹಿತದ ರಾಜಕಾರಣಕ್ಕೆ ನೀಡಿದ ಬೆಂಬಲವಾಗಿದೆ. ಕೇಂದ್ರದ ಜನಪರ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಜೀವನಮಟ್ಟವನ್ನು ಮೇಲಕ್ಕೆತ್ತಿವೆ. ಪಕ್ಷದ ಸಂಘಟಿತ ಶಕ್ತಿ, ಕಾರ್ಯಕರ್ತರ ತ್ಯಾಗ ಮತ್ತು ಶ್ರಮದ ಫಲವಾಗಿ ಈ ರೀತಿಯ ಐತಿಹಾಸಿಕ ಗೆಲುವು ಸಾಧ್ಯವಾಗಿದೆ ಎಂದರು. ಮುಖಂಡರಾದ ಚಿನ್ನು ರಾಮಸ್ವಾಮಿ, ಯಶೋದಾ ರಾಮಾಸ್ವಾಮಿ, ಶಿವಕುಮಾರ್​, ಪೂಜಾ ಚಂದ್ರ, ಸತೀಶ್​, ರಂಜಿತ್​ ಕಿರಣ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net