ಶಾಲಾ- ಕಾಲೇಜುಗಳಲ್ಲಿ ಪತ್ರಿಕೆ ಓದು ಕಡ್ಡಾಯಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಮನವಿ
ಕಾರ್ಯನಿರತ ಪತ್ರಕರ್ತರ ಸಂಘ ಮನವಿ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಎಚ್.ಬಿ. ಮದನಗೌಡ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗ ಮನವಿ
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದಿಸುವ ಮತ್ತು ನೋಟಿಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡಿರುವಂತೆ ರಾಜ್ಯದಲ್ಲಿಯೂ ಮಾಡಬೇಕು
ಶೀಘ್ರವೇ ನಮ್ಮ ರಾಜ್ಯದಲ್ಲೂ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಗಮನ ಮತ್ತೊಮ್ಮೆ ಸೆಳೆಯಲಾಯಿತು.
ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ಸೂಚನಾ ಲಕಗಳಲ್ಲಿ ಹಾಕುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ತಿಳಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಎಚ್.ಬಿ. ಮದನಗೌಡ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗ ಅವರು ಸಲ್ಲಿಸಿದ ಮನವಿ ಸ್ವೀಕರಿಸಿ ಈ ಭರವಸೆ ನೀಡಿದರು.
ಈ ಹಿಂದೆ ಶಾಲಾ ಕಾಲೇಜಿನಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಇದ್ದಂತೆ ಈಗಲೂ ಮುಂದುವರಿಸಲು ಸೂಕ್ತ ಕ್ರ ತೆಗೆದುಕೊಳ್ಳುವಂತೆ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದರು.
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದಿಸುವ ಮತ್ತು ನೋಟಿಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡಿರುವಂತೆ ರಾಜ್ಯದಲ್ಲಿಯೂ ಮಾಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಈ ಹಿಂದೆಯೂ ಸರ್ಕಾರಕ್ಕೆ ಮನವಿ ಮಾಡಿತ್ತು. ಶೀಘ್ರವೇ ನಮ್ಮ ರಾಜ್ಯದಲ್ಲೂ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಗಮನ ಮತ್ತೊಮ್ಮೆ ಸೆಳೆಯಲಾಯಿತು.
ಪಠ್ಯ ಪುಸ್ತಕದಲ್ಲಿ ಪತ್ರಿಕೆಗಳ ವಿಷಯವನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಜ್ಞಾನದ ಹಸಿವನ್ನು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಬಗ್ಗೆ ತಜ್ಞರ ಜತೆಗೆ ಅಧ್ಯಯನ ಮಾಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿ ಮಾಡಿಕೊಳ್ಳಲಾಗಿದೆ.