ಏ.18ಕ್ಕೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಅಧಿಕಾರಿಗಳಿಗೆ ಕಾರ್ಯಾಗಾರ

,
,
Published on
ಕಲಬುರಗಿ: ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಜಿಲ್ಲೆಯ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳಿಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಇದೇ‌ ಏ.18 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠ ಹಾಗೂ ಕಲಬುರಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಈ ಕಾರ್ಯಗಾರವನ್ನು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟಸಿಂಗ್ ಉದ್ಘಾಟಿಸಲಿದ್ದಾರೆ.
ಜಿಲ್ಲಾಧಿಕಾರಿ‌ ಬಿ. ಫೌಜಿಯಾ ತರನುಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯುವನೀ ಕಾರ್ಯಾಗಾರದಲ್ಲಿ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಡಾ. ರಿಚರ್ಡ ವಿನ್ಸೆಂಟ್ ಡಿಸೋಜಾ ಹಾಗೂ ಡಾ. ಮಹೇಶ ವಾಲ್ವೇಕರ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಭಾಗವಹಿಸಲಿದ್ದಾರೆ.
ಕಾರ್ಯಗಾರಕ್ಕೆ ಜಿಲ್ಲೆಯ ಎಲ್ಲಾ ಜಿಲ್ಲಾ- ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಪ್ಪದೆ ಭಾಗವಹಿಸುವಂತೆ ಕೋರಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net