ಮದ್ದೂರಿನ ಕೋಟೆ ಬೀದಿಯಲ್ಲಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ರಾಯರ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕೋಟೆ ಬೀದಿ
ಶ್ರೀರಾಘವೇಂದ್ರಸ್ವಾಮಿ ಮಠ
ಮದ್ದೂರು: ನಗರದ ಕೋಟೆಬೀದಿಯಲ್ಲಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಶ್ರೀರಾಘವೇಂದ್ರ ಗುರು ಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅದ್ದೂರಿಯಾಗಿ ಜರುಗಿತು.
ರಾಯರ ವೃಂದಾವನಕ್ಕೆ ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಮಠಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು. ಬಳಿಕ ಬೃಂದಾವನಕ್ಕೆ ಪ್ರದಕ್ಷಿಣೆ ಹಾಕಿ, ರಾಯರ ಅನುಗ್ರಹದಿಂದ ಇಷ್ಟಾರ್ಥಗಳು ಸಿದ್ಧಿಸಲಿ ಎಂದು ಪ್ರಾರ್ಥಿಸಿದರು.
ಮಠದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ರಾಮಚಂದ್ರ ಪ್ರಸಾದ್ ಮಾತನಾಡಿ, ನಗರದ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ಕೃಷ್ಣ ಪಕ್ಷದ ಆರಂಭದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿದೆ. ರಾಯರನ್ನು ಕಲಿಯುಗದ ಕಾಮಧೇನು ಎಂದು ಭಕ್ತರು ಪೂಜಿಸಿ ಕೃತಾರ್ಥರಾಗುತ್ತಿದ್ದಾರೆ ಎಂದರು.
ಮಹೋತ್ಸವದ ಅಂಗವಾಗಿ ಶ್ರೀಮಠದ ಸುತ್ತ ರಾಯರ ಕಿರು ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಾಮರ ವೀಣಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಿತು. ಅರ್ಚಕ ಬದರಿನಾಥ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಸೇವಾ ಕಾರ್ಯಕ್ರಮಗಳು ನಡೆದವು.
ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಸೇವಾ ಟ್ರಸ್ಟ್ ಮೋಹನ್, ಭಾರ್ಗವ, ದೇಗುಲದ ಪ್ರಧಾನ ಅರ್ಚಕ ಕೆ.ಶ್ರೀನಿವಾಸ್ ಆಚಾರ್ ಸೇರಿದಂತೆ ಮಠದ ಪದಾಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.