ಎಸ್ ಐಆರ್ : ಯಾದಗಿರಿ ಜಿಲ್ಲೆಯವಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಲ್ಲ ತಹಶೀಲ್ದಾರ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಪಟ್ಟಿ ಪ್ರಕಟ

,
,
Published on

ಪ್ರಮುಖ ಮುಖ್ಯಾಂಶಗಳು

  • ಆಕ್ಷೇಪಣೆ ಸಲ್ಲಿಕೆಗೆ ಅಕ್ಟೋಬರ್ 22ಕೊನೆಯ ದಿನ ಜಿಲ್ಲೆಯಲ್ಲಿ
  • 1162 ಮತಗಟ್ಟೆಗಳಲ್ಲಿ ಪರಿಶೀಲನೆ; ಅರ್ಹ ಮತದಾರರು ನಮೂನೆ-6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ
ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳು, ಹಾಗೂ ಎಲ್ಲಾ ಮತಗಟ್ಟೆಗಳಲ್ಲಿ ಈ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಅಕ್ಟೋಬರ್ 22 ರಂದು ಆಕ್ಷೇಪಣೆಗೆ ಕೊನೆ ದಿನ: ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಹಾಗೂ ಆಗಸ್ಟ್ 24ರಿಂದ ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ವಿಲೇವಾರಿ ಮಾಡಲಾಗುವುದು.

ಹೊಸ ಮತದಾರರ ನೋಂದಣಿ:

ಕರಡು ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಹಾಗೂ 01/10/2026 ಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವ ಯುವಕ/ ಯುವತಿಯರು ನಮೂನೆ-6 ನ್ನು ಘೋಷಣೆ ಪತ್ರದೊಂದಿಗೆ ಬಿಎಲ್‌ಒ ನೀಡುವುದು ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.

10,53,236ಮತದಾರರು:

ಮತದಾರರ ಪಟ್ಟಿ ಪರಿಷ್ಕರಣೆಯ ನಂತರ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರಿದ್ದಾರೆ. 8.64 ಲಕ್ಷ ಮತದಾರರ ಡಿಜಿಟೈಜೇಶನ್ ಆಗಿರುತ್ತಾರೆ. ಈ ಪೈಕಿ
ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನೋ- ಮ್ಯಾಪಿಂಗ್ 12264 ಹಾಗೂ 42798 ಅನಾಮಲೀಸ್ ಮತದಾರರು ಇದ್ದು, ಸುಮಾರು 55 ಸಾವಿರಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಿ ಅವಶ್ಯಕ ದಾಖಲೆಗಳನ್ನು ಪಡೆದು ಅಹವಾಲು ಮಾಡಲಾಗುವುದು.ನಂತರ ಮೆಲ್ಮಾನವಿಗೂ ಕೂಡ ಅವಕಾಶವಿದೆ ಎಂದು ಹೇಳಿದರು.ಪ್ರಥಮ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ದ್ವಿತೀಯ ಮೇಲ್ಮನವಿಯನ್ನು ಮಾನ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಕರ್ನಾಟಕ ಬೆಂಗಳೂರು ರವರಿಗೆ ಸಲ್ಲಿಸಲು ಅವಕಾಶವಿರುತ್ತದೆ.
ಮನೆ ಮನೆ ಸಮೀಕ್ಷೆ ಕಾರ್ಯದ ನಂತರ ಜಿಲ್ಲೆಯಲ್ಲಿ 28 ಹೊಸ ಮತಗಟ್ಟೆಗಳನ್ನು ರೂಪಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 1162ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಬಿ ಎಲ್ ಓ ಗಳು ಅವಿರತವಾಗಿ ಶ್ರಮಿಸಿದ್ದಾರೆ. ವಿವಿಧ ದೂರುಗಳಿಗೆ ತಕ್ಷಣ ಸ್ಪಂದಿಸಲಗುತ್ತಿದೆ. ಹೊಸದಾಗಿ ಹೆಸರು ಸೇರ್ಪಡೆ ಗೆ ಅರ್ಜಿ ನಮೂನೆ 6 ಹಾಗೂ ವರ್ಗಾವಣೆಗೆ ಫಾರ್ಮ್ 8 ಸಲ್ಲಿಸಬೇಕು. ಸಾರ್ವಜನಿಕರು, ರಾಜಕೀಯ ಪಕ್ಷಗಳ ಬಿಎಲ್ಎಗಳು ಸೂಕ್ತ ಸಹಕಾರ ನೀಡಿ ಮತದಾರರ ಸೇರ್ಪಡೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಬೇಕು.
ಕರಡು ಮತದಾರರ ಪಟ್ಟಿ ಪರಿಶೀಲಿಸಿ ನಿಗದಿತ ಅವಧಿಯೊಳಗೆ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸುವಂತೆ ಅವರು ತಿಳಿಸಿದರು.
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯದಲ್ಲಿ ಗೈರು ಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊಂಡಿರುವ (ಡುಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು 189233 (UEF) ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ್ ಜಿಲ್ಲಾಧಿಕಾರಿ ರಮೇಶ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net