ಮಳೆ ಜೋರು ಹಿನ್ನೆಲೆ: 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್- Yellow alert in 13 districts

ಜೋರು ಮಳೆ
ಜೋರು ಮಳೆ
Published on

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ ಸೇರಿ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾನುವಾರ ಮಳೆ ಬಿತ್ತು.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು ಮತ್ತು ಹಾಸನದಲ್ಲಿ ಆ.24ರಿಂದ ಆ.26ವರೆಗೆ ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಆ.24ರಂದು ಯೆಲ್ಲೋ ಅಲರ್ಟ್ ಇರಲಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಹಾವೇರಿ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯಲಿದೆ.
ಇದೇವೇಳೆ ಕೆಲವಡೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net