

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತಪಟ್ಟಿದ್ದಾನೆಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಆತ ಉಸಿರಾಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕೃತ್ತು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಲೂಕಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ನಿವಾಸಿ ರಜತ್(30) ತೀವ್ರ ಅಸೌಖ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಯುವಕನನ್ನು ಮನೆಗೆ ಕರೆದೊಯ್ಯುವಂತೆ ವೈದ್ಯರು ಬುಧವಾರ ತಿಳಿಸಿದ್ದರು. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದು, ತೆಗೆದರೆ ಉಸಿರು ನಿಂತು ಅಸುನೀಗುತ್ತಾರೆ ಎಂದು ತಿಳಿಸಿದ್ದರು.