ಕೊಠಡಿಯ ಬಾಗಿಲು ತೆರೆಯದೆ ಇದ್ದಾಗ ಕಿಟಕಿಯಲ್ಲಿ ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಮೃತನ ತಂದೆ ದೇವರಾಜ್ ನೀಡಿದ ದೂರಿನ ಮೇಲೆ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.