ಅಪಘಾತದಲ್ಲಿ ಯುವತಿ ಸಾವು

Young woman dies in accident
Young woman dies in accident
Published on

ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಐಷಾರಾಮಿ ವೋಲ್ವೋ ಬಸ್​ ಹಾಗೂ ಕಂಟೇನರ್​ ಲಾರಿ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರಿನ ಕೌಸರ್​ ತಾಜ್​ (27) ಮೃತೆ.ಇವರು ಹೈದರಾಬಾದ್​ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್​ಣ ಮುಂಭಾಗದಲ್ಲಿ ಕುಳಿತಿದ್ದರು. ಕಂಟೇನರ್​ಡಿಕ್ಕಿ ಹೊಡೆದ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂದೆಯೇ ಕುಳಿತಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್​ ಸಹಾಯದಿಂದ ಬಸ್​ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆಯಬೇಕಾಯಿತು. ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅದೃಷ್ಟವಶಾತ್​ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರಿಗೆ ಏನೂ ಆಗಿಲ್ಲ. ಅಪಘಾತದಿಂದ ಕೆಲ ಕಾಲ ರಸ್ತೆಯಲ್ಲಿ ಸಂಚಾರ ಸಿಕ್ಕು ಉಂಟಾಯಿತು. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net