ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಪಠಾಣ್ನನ್ನು ಕೊಂದ ಕಿಡಿಗೇಡಿಗಳು ಎಂದು ಗುರುತಿಸಲಾಗಿದ್ದು, ಕೊಲೆಗೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇನ್ನು ನಾಲ್ವರು ಪೊರಾರಿಯಾಗಿದ್ದಾರೆ. ಅವರಿಗಾಗಿ ಪತ್ತೆದಾರಿ ಕಾರ್ಯ ಮುಂದುವರೆದಿದೆ. ಇಬ್ಬರ ಮಧ್ಯೆ ಇದ್ದ ಹಳೆ ವೈಷಮ್ಯ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.