ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಯುವ ಮುಖಂಡರನ್ನು ಸ್ವಾಗತಿಸಿ ಮಾತನಾಡಿ, ಹಣ ಬಲದ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ದಿನ ನಡೆಯಲ್ಲ, ಆಸೆ ಆಮಿಷ ತೋರಿಸಿ ಹೆಚ್ಚಿನ ದಿನ ಜನರ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ, ಕ್ಷೇತ್ರದ ಜನಕ್ಕೆ ತಮ್ಮ ತಪ್ಪಿನ ಅರಿವಾಗುತ್ತಿದೆ. ನನ್ನ ಅವಧಿಯಲ್ಲಾಗಿರುವ ಅಭಿವೃದ್ಧಿ ಕೆಲಸದ ಬಗ್ಗೆ ಮನವರಿಕೆಯಾಗುತ್ತಿದೆ. ಕಾಂಗ್ರೆಸ್ ಮೊದಲಿನಂತೆ ಸದೃಢಗೊಳ್ಳಲಿದೆ ಎಂದರು.