ಯುವಜನತೆಗೆ ಯುವನಿಧಿ ಆಸರೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ
Published on
ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆ ಮೂರು ವರ್ಷ ಪೂರೈಸಿದೆ. 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಸಲಹೆ ನೀಡಿದರು.
ಯುವನಿಧಿ ಯೋಜನೆಯಿಂದ ಸಾಕಷ್ಟು ಪದವೀಧರ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ದೂರದ ನಗರಗಳಿಗೆ ಹೋಗಿ ಉದ್ಯೋಗ ಹುಡುಕಿಕೊಳ್ಳಲು, ಸಣ್ಣ ಪುಟ್ಟ ಖರ್ಚು ವೆಚ್ಚಗಳನ್ನು ಸರಿದೂಗಿಸಿಕೊಳ್ಳಲು ಸಹಾಯಕವಾಗಿದೆ. ಫಲಾನುಭವಿಗಳು ಪ್ರತಿ ತಿಂಗಳು 1ನೇ ತಾರೀಖಿನಿಂದ 25ರೊಳಗೆ ತಾವು ಸ್ವ-ಉದ್ಯೋಗಿಯಲ್ಲ ಎಂದು /ಉದ್ಯೋಗ ಮಾಡುತ್ತಿಲ್ಲ ಎಂದು / ಉನ್ನತ ಶಿಕ್ಷಣ ಮಾಡುತ್ತಿಲ್ಲ ಎಂದು ಸ್ವಯಂ ದೃಢೀಕರಣವನ್ನು ಮಾಡಬೇಕು.
ಹೀಗೆ ಸ್ವಯಂ ದೃಢೀಕರಣವನ್ನು ಮಾಡಿಕೊಂಡವರಿಗೆ ಯುವನಿಧಿ ಭತ್ಯೆಯನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ.
ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿನವರೆಗೆ ಸರ್ಕಾರವು 950.57 ಕೋಟಿ ರೂ.ನ್ನು ನಿರುದ್ಯೋಗಿ ಯುವಕರ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಯಶಸ್ವಿಯಾಗಿ ತಲುಪಿಸಿದೆ. ಬೃಹತ್ ಮೊತ್ತವು ರಾಜ್ಯದ ನಿರುದ್ಯೋಗಿ ಯುವಜನತೆಯ ಪಾಲಿಗೆ ಸಂಕಷ್ಟದ ಸಮಯದಲ್ಲಿ ದೊಡ್ಡ ಆಸರೆಯಾಗಿದೆ.
ಈವರೆಗೆ 4,22,519 ಅಭ್ಯರ್ಥಿಗಳು ಯೋಜನೆ ಲಾಭ ಪಡೆಯಲು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಪದವೀಧರರು ಮಾತ್ರವಲ್ಲದೆ ಡಿಪೋಮಾ ಮುಗಿಸಿದ ಯುವಕರೂ ಸೇರಿದ್ದಾರೆ ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net