ಹುಳಿಯಾರು drugs ಹೋಬಳಿಯ ಕೆಂಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಅಭಿಯಾನದಲ್ಲಿ ಚಂದನಾ, ಪಾರ್ವತಿ, ಆರತಿ, ರತ್ನಾ, ಲಕ್ಷಿ$್ಮ, ಸುಜಾತಾ, ರಾಮಚಂದ್ರಣ್ಣ, ಶಂಕರ ಲಿಂಗಪ್ಪ, ಅಜಯ್, ನಿಜಲಿಂಗಪ್ಪಣ್ಣ, ನಾಗರಾಜಣ್ಣ, ಶಾಲಾ ಸಿಬ್ಬಂದಿ ಇದ್ದರು.
Published on:
Copied
Follow Us
ಹುಳಿಯಾರು:
ಯುವ ಜನತೆ ದೇಶದ ಶಕ್ತಿಯಾಗಿದ್ದು, ಮಾದಕ ವಸ್ತುಗಳ ದುಶ್ಚಟದಿಂದ ದೂರವಿರವಿದ್ದಾಗ
drugs
ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಗೀತಾ ತಿಳಿಸಿದರು.
ಕೆಂಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ನಶಾಮುಕ್ತರಾಗುವ ಮಹಾ ಅಭಿಯಾನದಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದರೂ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ವಿಪಯಾರ್ಸ. ಈ ನಿಟ್ಟಿನಲ್ಲಿ ಮಕ್ಕಳಿರುವಾಗಲೇ ಅರಿವು ಮೂಡಿಸಿದರೆ ಒಳಿತು ಎಂದು ವಿಶ್ವವಿದ್ಯಾಲಯದಿಂದ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾದಕ ವಸ್ತುಗಳ ಸೇವನೆ ಅತ್ಯಂತ ಅಪಾಯಕಾರಿ. ಆದರೆ ಪ್ರಸ್ತುತ ಕ್ಷಣಿಕ ಸಂತೋಷಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿರುವುದು ವಿಷಾಧನೀಯ. ವಿದ್ಯಾರ್ಥಿಗಳು ಮಾದಕ ವಸ್ತುಗಗಳಿಂದ ದೂರ ಉಳಿದು, ಪುಸ್ತಕಗಳ ಓದು ಹಾಗೂ ಕ್ರೀಡೆಗಳಲ್ಲಿ ತೊಡಗುವ ಮೂಲಕ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.