ಕಲಬುರಗಿಯಲ್ಲಿ ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಮಂಜುನಾಥ ಅಂಜುಟಗಿ, ಸಂಗಮೇಶ ಹಲಕರ್ಟಿ, ಪ್ರವಿಣ ಪಾಟೀಲ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಹೇಳಿಕೆ
ಬಿಜೆಪಿ ತೊರೆದು "ಕೈ' ಹಿಡಿದ ಕಾರ್ಯಕರ್ತರು
ಕಲಬುರಗಿ: ರಾಜ್ಯ ಸರ್ಕಾರದ ಜನಪರ ಕೆಲಸ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ ಹಾಗೂ ಕ್ಷೇತ್ರದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಶಾಸಕ ಎಂ.ವೈ.ಪಾಟೀಲ್ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಸಾಕಷ್ಟು ಯುವಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಅಧ್ಯಕ್ಷ ಅರುಣಕುಮಾರ ಪಾಟೀಲ್ ಹೇಳಿದರು.
ಅಕ್ಕಮಹಾದೇವಿ ಕಾಲನಿಯ ತಮ್ಮ ನಿವಾಸದಲ್ಲಿ ಶನಿವಾರ ಅತನೂರ ಗ್ರಾಮದ ಬಿಜೆಪಿ ಯುವ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸ್ವಾಗತಿಸಿ ಮಾತನಾಡಿ, ಯುವಜನರ ಉತ್ಸಾಹ, ವಿಶ್ವಾಸವೂ ಬದಲಾವಣೆ ಸಂಕಲ್ಪಕ್ಕೆ ಸಾಯಾಗಿದೆ. ಮತೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದ್ದು, ಅಭಿವೃದ್ಧಿ ಮತ್ತು ಜನಪರ ಆಡಳಿತ ನೀಡಲಾಗುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿ ಹೆಗಲಿಗೆ ಹೆಗಲು ಕೊಟ್ಟು ಹಗಲಿರುಳು ಪ ಸಂಘಟನೆ ಮಾಡೋಣ. ಬೂತ್ ಮಟ್ಟದಿಂದ ಕಾಂಗ್ರೆಸ್ ಬಲವರ್ಧನೆಗೆ ಶ್ರಮಿಸೋಣ ಎಂದರು.