ಕಲಬುರಗಿ ಜಿಲ್ಲೆಯ ಶಾಲಾ-ಕಾಲೇಜು ಕಟ್ಟಡಗಳ ಸ್ಥಿತಿಗತಿ ಕುರಿತು ವರದಿ ನೀಡಲು : ಜಿಪಂ ಸಿಇಒ ರಾಹುಲ್ ಸೂಚನೆ

,
,
Published on
ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಶಾಲಾ ಕಟ್ಟಡಗಳ ಮೇಲ್ಚಾವಣಿ ಪದರ ಕುಸಿದು ಬಿದ್ದಿರುವ ಪ್ರಕರಣಗಳು ಕಂಡುಬಂದಿರುವ ಪ್ರಯುಕ್ತ ಇಂದು ಜಿಲ್ಲಾ ಪಂಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ಸಭೆ ಜರುಗಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಲಬುರಗಿ ಹಿರಿಯ ಅಧಿಕಾರಿಗಳು, ಶಿಕ್ಷಣ ಇಲಾಖೆ ಹಾಗೂ ಪಂಚಾಯತ್ ರಾಜ್, ಕೆ.ಆರ್.ಐ.ಡಿ.ಎಲ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲೆಯಲ್ಲಿನ ಸರಕಾರಿ ಶಾಲೆಗಳ ಕಟ್ಟಡದ ಪ್ರಸ್ತುತ ಸ್ಥಿತಿ ಗತಿಗಳ ಕುರಿತು ಜಿಲ್ಲೆಯ ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರಿಗೆ ಜಂಟಿಯಾಗಿ ತಮ್ಮ ತಾಲೂಕಿನ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಜಂಟಿ ವರದಿಯನ್ನು ಕೂಡಲೇ ಸಲ್ಲಿಸಲು ಸೂಚಿಸಲಾಯಿತು.
ಈ ಕುರಿತು ಮೇಲುಸ್ತುವಾರಿ ಮಾಡಲು ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ರವರಿಗೆ ಸೂಚಿಸುತ್ತಾ ರಿಪೇರಿ ಹಾಗೂ ಇನ್ನಿತರ ಸಣ್ಣ ಪುಟ್ಟ ದುರಸ್ತಿಗಳ ಶಾಲೆಗಳ ಪಟ್ಟಿ ಹಾಗೂ ದೊಡ್ಡ ಪ್ರಮಾಣದ ದುರಸ್ತಿ ಇದ್ದಲ್ಲಿ ಅಂತಹ ಪ್ರಸ್ತಾವನೆಯನ್ನು ತುರ್ತಾಗಿ ಸಲ್ಲಿಸಲು ಸಿಇಒ ಅವರು ತಿಳಿಸಿದರು.
ಮುಂದುವರೆದು, ಮುಂಬರುವ ದಿನಗಳಲ್ಲಿ ಯಾವುದೇ ಅನಾಹುತಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಂಬಂದಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net