ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನೋಂದಣಿ ಆರಂಭ: ನೋಂದಣಿಗೆ ಅವಶ್ಯವಿರುವ ದಾಖಲೆಗಳೇನು?: sslc, puc exam Registration

ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರು ಹಾಗೂ ಖಾಸಗಿ ಅಭ್ಯರ್ಥಿಗಳ ನೊಂದಣಿಗೆ ಮಾರ್ಗಸೂಚಿ ಹಾಗೂ ಕೈಪಿಡಿಗಳನ್ನು ಬಿಡುಗಡೆ ಮಾಡಿದೆ. ನ.11ರವರೆಗೆ ನೋಂದಣಿಗೆ ಕಾಲಾವಕಾಶ ನೀಡಲಾಗಿದೆ.
Karnataka School Examination and Assessment Board
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿGoogle
Published on: 

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2027ರ ಮಾರ್ಚ್/ಎಪ್ರಿಲ್‌ನಲ್ಲಿ ನಡೆಯಲಿರುವ ಈ ಪರೀಕ್ಷೆಗಳಿಗೆ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಗೂ ಚಾಲನೆ ನೀಡಿದೆ.

ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರು ಹಾಗೂ ಖಾಸಗಿ ಅಭ್ಯರ್ಥಿಗಳ ನೊಂದಣಿಗೆ ಮಾರ್ಗಸೂಚಿ ಹಾಗೂ ಕೈಪಿಡಿಗಳನ್ನು ಬಿಡುಗಡೆ ಮಾಡಿದೆ. ನ.11ರವರೆಗೆ ನೋಂದಣಿಗೆ ಕಾಲಾವಕಾಶ ನೀಡಲಾಗಿದೆ.

ಶಾಲಾ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರು ಶಾಲಾ ಲಾಗಿನ್ ಮೂಲಕ ನೋಂದಣಿ ಕಾರ್ಯವನ್ನು ಪ್ರಾರಂಭಿಸಬಹುದಾಗಿದೆ.

ವಿದ್ಯಾರ್ಥಿಗಳ ಬಹುತೇಕ ವಿವರಗಳನ್ನು ಸ್ಯಾಟ್ಸ್ ಮೂಲಕ ಪಡೆಯಲಾಗುವುದರಿಂದ ಅಭ್ಯರ್ಥಿಯ ಹೆಸರು, ತಂದೆ- ತಾಯಿಯ ಹೆಸರು, ಜನ್ಮದಿನಾಂಕ, ಪ್ರವರ್ಗ, ಧರ್ಮ, ಲಿಂಗ, ಹಾಗೂ ಮಾಧ್ಯಮಗಳ ವಿವರಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಇವುಗಳಲ್ಲಿ ಬದಲಾವಣೆ ಮಾಡುವುದಾದರೆ ಮೊದಲಿಗೆ ಸ್ಯಾಟ್ಸ್ ತಂತ್ರಾಂಶದಲ್ಲಿ ಬದಲಾಯಿಸಿ ನಂತರ ನೋಂದಣಿ ಮಾಡುವಂತೆ ಸೂಚಿಸಲಾಗಿದೆ.

ಖಾಸಗಿ ಅಭ್ಯರ್ಥಿಗಳು

ಶಾಲಾ ಪುನರಾವರ್ತಿತ, ಖಾಸಗಿ ಅಭ್ಯರ್ಥಿಗಳು ಕಳೆದ ಸಾಲಿನಂತೆಯೇ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ವೈಯಕ್ತಿಕ ಲಾಗಿನ್ ಸೃಷ್ಟಿಸಿಕೊಂಡು ನೇರವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ತಮಗೆ ಸ್ವೀಕೃತವಾಗಿರುವ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳು ಸರಿಯಾಗಿರುವ ಬಗ್ಗೆ ದೃಢೀಕರಿಸಬೇಕಾಗುತ್ತದೆ.

ನೋಂದಣಿ ಶುಲ್ಕ

ಪ್ರಥಮ ಬಾರಿಗೆ ಪರೀಕ್ಷೆ ಬರೆಯುತ್ತಿರುವವರಿಗೆ 746 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿನಾಯ್ತಿ ನೀಡಲಾಗಿದೆ. ನಿಗದಿತ ಆದಾಯ ಮಿತಿಯ ಒಳಗಿರುವ ಪ್ರವರ್ಗ-1 ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯ್ತಿ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net