Covid 19; ರಾಜ್ಯಗಳಿಗೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ

Covid 19
Published on

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್​-19 ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಶುಕ್ರವಾರ ಈ ಕುರಿತು ವರ್ಚುವಲ್​ ಮೂಲಕ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.

ಜೀನೋಮ್​ ಸೀಕ್ವೆನ್ಸಿಂಗ್​ ಜೊತೆಗೆ ಕೋವಿಡ್​ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ಬಿದ್ದಲ್ಲಿ ಈ ಹಿಂದೆ ಕೋವಿಡ್​ ಅಲೆಗಳು ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ.

ಏಪ್ರಿಲ್​ 8 ಮತತ್ಉ 9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ. ಏಪ್ರಿಲ್​ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಪರಿಶೀಲನೆಗಾಗಿ ಮಾಕ್​ ಡ್ರಿಲ್​ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯ ಆದೇಶಿಸಿದ್ದಾರೆ.

ಸಭೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳ ಆರೋಗ್ಯ ಮಂತ್ರಿಗಳು, ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net