ನಿವೇಶನ ಕೊಡಿಸುವ ವಂಚನೆಯಿಂದ ದೂರವಿರಿ

Sundaresh
Published on

ಶಿವಮೊಗ್ಗ: ಸೂಡಾದಿಂದ ನಿವೇಶನ ಕೊಡಿಸುವುದಾಗಿ ಕೆಲವರು ಸಾರ್ವಜನಿಕರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದು, ಇಂಥವರ ಮಾತಿಗೆ ಜನ ಮರುಳಾಗಬಾರದು ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಎಚ್ಚರಿಸಿದ್ದಾರೆ.

ಸೂಡಾ (ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ)ದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024ರ ಡಿ.5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೆಲವರು ಇದನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಿವೇಶನ ಪಡೆಯಲು ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಜನರು ಹಣ ಕಳೆದುಕೊಂಡರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ ಎಂದು ಸುಂದರೇಶ್ ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net