

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ಕ್ಕೆೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಜಾರಿಗೊಳಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.
ಆಯೋಗದ ನೋಟಿಸ್ ಹಾಗೂ ಅದಕ್ಕೆೆ ಸಂಬಂಧಿಸಿದ ವಿಚಾರಣೆ ರದ್ದುಪಡಿಸುವಂತೆ ಕೋರಿ ಕೆಪಿಸಿಎಲ್ ಉಪ ಪ್ರಧಾನ ವ್ಯವಸ್ಥಾಾಪಕ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಾಯಪೀಠ ಬುಧವಾರ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಕೆಪಿಸಿಎಲ್ ಪರ ವಕೀಲರು ವಾದ ಮಂಡಿಸಿ, ಬಡ್ತಿ ನೀಡುವುದು ಸೇವಾ ವಿಷಯವಾಗಿದ್ದು, ಇದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ವ್ಯಾಾಪ್ತಿಿಗೆ ಬರುವುದಿಲ್ಲ. ಆದ್ದರಿಂದ ಜೂ. 16ರಂದು ಆಯೋಗ ಜಾರಿಗೊಳಿಸಿರುವ ನೋಟಿಸ್ ರದ್ದುಪಡಿಸಬೇಕು. ಕೆಪಿಸಿಎಲ್ ವಿರುದ್ಧ ವಿಚಾರಣೆ ನಡೆಸದಂತೆ ಆಯೋಗಕ್ಕೆೆ ನಿರ್ಬಂಧಿಸಬೇಕು. ಅರ್ಜಿಯ ಅಂತಿಮ ಇತ್ಯರ್ಥದವರೆಗೆ ಆಯೋಗದ ನೋಟಿಸ್ ಹಾಗೂ ಅದಕ್ಕೆೆ ಸಂಬಂಧಿಸಿದ ವಿಚಾರಣೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು
ಈ ವಾದವನ್ನು ಪರಿಗಣಿಸಿದ ನ್ಯಾಾಯಪೀಠ, ಆಯೋಗದ ನೋಟಿಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಿತು. ಅಲ್ಲದೇ ಆಯೋಗ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.