ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ

lady Suside+1
Published on

ರಾಣೆಬೆನ್ನೂರ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ನಗರದ ಅಡವಿ ಆಂಜನೇಯ ಬಡಾವಣೆಯಲ್ಲಿ ಗುರುವಾರ ಸಂಭವಿಸಿದೆ.
ಸುಮಾ ಪ್ರಶಾಂತ ಜಲಗೇರಿ (31) ಮೃತ ಮಹಿಳೆ.
ಇವರು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net