Allu Arjun ಮನೆ ಮೇಲೆ ಕಲ್ಲು ತೂರಾಟ; ಉಸ್ಮಾನಿಯ ವಿಶ್ವವಿದ್ಯಾಲಯ ಸಮಿತಿಯ 8 ಸದಸ್ಯರ ಬಂಧನ!

dk (51)
Published on

ಹೈದರಾಬಾದ್​: ಇಲ್ಲಿನ ಜೂಬ್ಲಿ ಹಿಲ್ಸ್​ನಲ್ಲಿರುವ ನಟ ಅಲ್ಲು ಅರ್ಜುನ್(Allu Arjun)​ ಅವರ ಮನೆ ಮೇಲೆ ಭಾನುವಾರ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದ ಬೆನ್ನಲ್ಲೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಸ್ಮಾನಿಯ ವಿಶ್ವವಿದ್ಯಾಲಯ ಸಮಿತಿಯ 8 ಸದಸ್ಯರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ಸಮಿತಿಯ ಕೆಲ ಸದಸ್ಯರು ಏಕಾಏಕಿ ಅಲ್ಲು ಅವರ ಮನೆಗೆ ನುಗ್ಗಿ ಆಸ್ತಿ ಹಾನಿ ಮಾಡಿದ್ದಾರೆ. ಈ ಹಿನ್ನೆಲೆ ಎಂಟು ಜನರನ್ನು ಬಂಧಿಸಿ ಠಾಣೆಗೆ ಕರೆದೊಯ್ಯಲಾಗಿದೆ. ಇನ್ನು ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತದಲ್ಲಿ ಮಹಿಳೆ ಮೃತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಕುಟುಂಬಕ್ಕೆ 1 ಕೋಟಿ ರೂ.ಪರಿಹಾರ ನೀಡಬೇಕು ಪ್ರತಿಭಟನೆಕಾರರು ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನೆ ನಡೆದಾಗ ನಟ ಅಲ್ಲು ಅರ್ಜುನ್​ ಮನೆಯಲ್ಲಿ ಇರಲಿಲ್ಲ ಎಂದು ವರದಿ ಉಲ್ಲೇಖಿಸಿವೆ.

ಇನ್ನು ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತದಲ್ಲಿ ಮಹಿಳೆ ಮೃತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳವಣಿಗೆಗಳು ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿವೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಸಿಎಂ ರೇವಂತ್ ರೆಡ್ಡಿ ಗುಡುಗಿದ್ದು, ಡಿ.22ರಂದು ವಿಧಾನಸಭೆಯಲ್ಲಿ ನಟನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲು ಅರ್ಜುನ್ (Allu Arjun) ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ನಡುವಿನ ಮುಸಿಕಿನ ಗುದ್ದಾಟಕ್ಕೆ ನಡೆಯುತ್ತಿದೆ,(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net