Vande Bharat Express: ದುರ್ಗ್-ವೈಜಾಗ್​ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಕಲ್ಲು ತೂರಾಟ; ಐವರ ಬಂಧನ

vande bharath
Published on

ಛತ್ತೀಸ್‌ಗಢ: ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಚಾಲನೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಛತ್ತೀಸ್‌ಗಢದ ಮಹಾಸುಮುಂದ್‌ನಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರ ಸಂಬಂಧಿ ರಾಜಕೀಯ ಪಕ್ಷದ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾಗ್ಬಹ್ರಾ ನಿವಾಸಿಗಳಾದ ಶಿವಕುಮಾರ್ ಬಘೇಲ್, ದೇವೇಂದ್ರ ಚಂದ್ರಕರ್, ಜಿತು ತಾಂಡಿ, ಲೇಖ್ರಾಜ್ ಸೋನ್ವಾನಿ ಮತ್ತು ಅರ್ಜುನ್ ಯಾದವ್ ಬಂಧಿತ ಆರೋಪಿಗಳು. ಅಧಿಕಾರಿಗಳ ಪ್ರಕಾರ, ಬಾಘೇಲ್ ಅವರ ಸೊಸೆ ರಾಜ್ಯದ ವಿರೋಧ ಪಕ್ಷದ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್.

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮ್ಮ 74 ನೇ ಹುಟ್ಟುಹಬ್ಬದ ಮುನ್ನಾದಿನದಂದು ವಂದೇ ಭಾರತ್​ಗೆ ಚಾಲನೆ ನೀಡುವ ಕೆಲವು ದಿನಗಳ ಮೊದಲ ಈ ಘಟನೆ ಸಂಭವಿಸಿದೆ. ಇದು ಛತ್ತೀಸ್‌ಗಢದ ದುರ್ಗ್ ಮತ್ತು ಆಂಧ್ರಪ್ರದೇಶದ ವಿಶಾಖಪಟ್ಟಣವನ್ನು (ವೈಜಾಗ್) ಸಂಪರ್ಕಿಸುತ್ತದೆ.

"ರೈಲು ಶುಕ್ರವಾರ ರಾತ್ರಿ 9 ಗಂಟೆಯ ಸುಮಾರಿಗೆ ಪ್ರಾಯೋಗಿಕ ಚಾಲನೆಯಲ್ಲಿ ವಿಶಾಖಪಟ್ಟಣದಿಂದ ದುರ್ಗ್‌ಗೆ ಹಿಂತಿರುಗುವಾಗ ಬಾಗ್‌ಬಹ್ರಾ ರೈಲು ನಿಲ್ದಾಣದ ಮೂಲಕ ಹಾದುಹೋಗುತ್ತಿತ್ತು" ಎಂದು ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ನ ಪ್ರವೀಣ್ ಸಿಂಗ್ ಧಕಡ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

“ಕೆಲವು ಸಮಾಜ ವಿರೋಧಿ ಶಕ್ತಿಗಳು ಅದರ ಮೇಲೆ ಕಲ್ಲುಗಳನ್ನು ಎಸೆದಿದ್ದರಿಂದ C2, C4 ಮತ್ತು C9 ಕೋಚ್‌ಗಳ ಕಿಟಕಿ ಫಲಕಗಳನ್ನು ಹಾನಿಗೊಳಿಸಿದ್ದಾರೆ. ಅದರಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ಆರ್‌ಪಿಎಫ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ಸಹಾಯಕ ಸಬ್-ಇನ್‌ಸ್ಪೆಕ್ಟರ್ ನೇತೃತ್ವದ ಆರ್‌ಪಿಎಫ್ ಬೆಂಗಾವಲು ತಂಡವು ಕಲ್ಲು ತೂರಾಟ ಬಗ್ಗೆ ಎಚ್ಚರಿಕೆಯನ್ನು ಕೊಟ್ಟಿದ್ದು ನಂತರ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ರೈಲ್ವೇ ಕಾಯಿದೆ, 1989ರ ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಯ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಯಾರಾದರೂ ಐದು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ) ಅಡಿಯಲ್ಲಿ ಗುಂಪನ್ನು ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net