ಪೊಲೀಸರಿಗೆ ಸಿಎಂ ಬೊಮ್ಮಾಯಿ ಖಡಕ್​ ವಾರ್ನಿಂಗ್​

CM
Published on

ಬೆಂಗಳೂರು: ರಾಜ್ಯದಲ್ಲಿ ಕೋಮು ಆಧಾರಿತ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಅಪರಾಧ ಕೃತ್ಯಗಳನ್ನು ನಿಯಂತ್ರಿಸುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ರಾಜ್ಯದ ಎಲ್ಲಾ ಐಜಿ, ಎಸ್.ಪಿ, ಹಾಗೂ ಪೊಲೀಸ್ ಆಯುಕ್ತ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಕಟ್ಟೆಚ್ಚರ ವಹಿಸಬೇಕು. ಶಾಂತಿ ಕಾಪಾಡುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.ಗಲಭೆಗೆ ಅವಕಾಶ ನೀಡಬಾರದು, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿದರು. ಇನ್ನು ಡಿಜಿ ಮತ್ತು ಡಿಐಜಿ ಪ್ರವೀಣ್ ಸೂದ್​ ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net