ಶಕ್ತಿ ಯೋಜನೆ ರದ್ದು ಮಾಡಿ ಅಥವಾ ನಮಗೆ ಆರ್ಥಿಕ ನೆರವು ನೀಡಿ: ಮುಖ್ಯಮಂತ್ರಿಗೆ ಆಟೋಚಾಲಕರ ಮನವಿ

siddaramaiah
Published on

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಭಾರಿ ಸದ್ದು ಮಾಡುತ್ತಿದೆ. ಯೋಜನೆ ಬಗ್ಗೆ ಪರ-ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ.

ಈ ಮಧ್ಯೆ ಯೋಜನೆಯನ್ನು ರದ್ದು ಮಾಡುವಂತೆ ಆಟೋ ಚಾಲಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇಂದು ಸಿಎಂ ಗೃಹ ಕಚೇರಿಯಲ್ಲಿ ಆಟೋ ಚಾಲಕರ ಸಂಘದವರು ಭೇಟಿಯಾಗಿ ಈ ಮನವಿ ಮಾಡಿಕೊಂಡಿದ್ದಾರೆ.

ಶಕ್ತಿ ಯೋಜನೆಯಿಂದ ನಮಗೆ ನಷ್ಟವಾಗುತ್ತಿದ್ದು, ಜೀವನನಿರ್ವಹಣೆಯೇ ಕಷ್ಟವಾಗುತ್ತಿದೆ. ಶಕ್ತಿ ಯೋಜನೆ ಮುಂದುವರಿಸಿದರೆ ನಮ್ಮ ಜೀವನ ಬೀದಿಗೆ ಬರುತ್ತದೆ. ಹೀಗಾಗಿ ಶಕ್ತಿ ಯೋಜನೆ ರದ್ದು ಮಾಡಿ ಅಥವಾ ಆಟೋ ಚಾಲಕರಿಗೂ ಅರ್ಥಿಕ ಸಹಾಯ ನೀಡಿ ಎಂದು ಆಟೋ ಚಾಲಕರ ಸಂಘಟನೆಗಳು ಮನವಿ ಮಾಡಿಕೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net