ಕಾಲೇಜು ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ! ಮುಖಕ್ಕೆ 17 ಹೊಲಿಗೆ, ಮೂಗಿಗೆ ಗಂಭೀರ ಗಾಯ | Dog Attack

ವಿಜಯವಾಣಿ - 2025-08-23T121413.590
Published on

Dog Attack: ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ವೈದ್ಯರು ಆಕೆಯ ಮುಖಕ್ಕೆ 17 ಹೊಲಿಗೆಗೆಳನ್ನು ಹಾಕಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವರದಿಯಾಗಿದೆ.

ಮುಖ, ಮೂಗು ಹಾನಿ!

ವರದಿಗಳ ಪ್ರಕಾರ, ಆಗಸ್ಟ್ 20ರಂದು ಶ್ಯಾಮ್ ನಗರದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳು ಮತ್ತು ಮಂಗಗಳ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಮೂರು ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿವೆ. ನಾಯಿಗಳ ದಾಳಿಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಅಲೆನ್ ಹೌಸ್ ರುಮಾ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲಾಗಿದೆ.

17 ಸ್ಟಿಚ್​!

ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳು ಆಕೆಯನ್ನು ರಸ್ತೆಯುದ್ದಕ್ಕೂ ಎಳೆದೊಯ್ದು, ಮುಖ ಮತ್ತು ದೇಹದ ಇತರ ಭಾಗಗಳಿಗೆ ಕಚ್ಚಿವೆ. ಯುವತಿಯ ಬಲ ಕೆನ್ನೆ ಹರಿದು ಎರಡು ಭಾಗಗಳಾಗಿದ್ದು, ಮೂಗಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಯುವತಿ ವಿಪರೀತ ಚೀರಾಟ ಕೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ನಾಯಿಗಳಿಂದ ಆಕೆಯನ್ನು ಬಚಾವ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವೈಷ್ಣವಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಕೊಡಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net