ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಕ್ರಮ

stray dogs
stray dogs
Published on

ತುಮಕೂರು: ನಗರದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಮಹಾನಗರಪಾಲಿಕೆ ದಿಟ್ಟ ಕ್ರಮಕ್ಕೆ ಮುಂದಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ 4 ತಂಡಗಳನ್ನು ವಿಭಾಗ ಮಾಡಿ 3 ಸಾವಿರ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಕ್ರಮವಹಿಸಿದೆ.

ಈ ಹಿಂದೆ ಪಾಲಿಕೆ ವತಿಯಿಂದ ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಚಿಕಿತ್ಸೆಗೆ ಹಲವು ಬಾರಿ ಟೆಂಡರ್​ ಕರೆದರೂ ಯಾರು ಮುಂದೆ ಬಂದಿರಲಿಲ್ಲ. ಆದರೆ, ಇದೀಗ ಆಸ್ರಾ ಎಂಬ ಪ್ರಾಣಿಗಳ ಕಲ್ಯಾಣ ಸಂಸ್ಥೆ ಮುಂದಾಗಿದ್ದು, ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಗುತ್ತಿಗೆ ನೀಡಿದೆ. ಅಸ್ರಾ ಪ್ರಾಣಿಗಳ ಕಲ್ಯಾಣ ಸಂಸ್ಥೆಯ ನುರಿತ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೀದಿ ನಾಯಿಗಳನ್ನು ಹಿಡಿದು ವೈಜ್ಞಾನಿಕವಾಗಿ ಶಸ್ತ್ರಚಿಕಿತ್ಸೆ ನಡೆಸಿ ನಗರದ ಹೊರವಲಯದಲ್ಲಿ ಅವುಗಳ ಉಪಚರಿಸಲು ಕ್ರಮವಹಿಸಿದೆ.

ನಗರದ 35 ವಾರ್ಡ್​ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚಾಗಿದ್ದು, ಮಕ್ಕಳು, ವೃದ್ಧರು, ಸಾರ್ವಜನಿಕರು ತೀವ್ರ ತೊಂದರೆ, ಭಯಬೀತರಾಗಿದ್ದು ಮಕ್ಕಳು, ವೃದ್ಧರು ನಾಯಿ ಕಡಿತಕ್ಕು ತುತ್ತಾಗಿರುವ ಪ್ರಕರಣಗಳು ಸಾಕಷ್ಟಿವೆ. ರೇಬಿಸ್​ ಕಾಯಿಲೆ ಹರಡದಂತೆ ನಾಯಿಗಳಿಗೆ ಆ್ಯಂಟಿ ರೇಬಿಸ್​ ಚುಚ್ಚುಮದ್ದು ಜತೆಗೆ ನಗರದಲ್ಲಿರುವ ಬೀದಿ ನಾಯಿಗಳ ಸಂತತಿ ಹೆಚ್ಚಾಗದಂತೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡುವುದರ ಮೂಲಕ ಶೀಘ್ರವಾಗಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net