ಪಿಒಪಿ ಗಣೇಶ ಬಳಸದಂತೆ ಕಟ್ಟಾಜ್ಞೆ

Paper Ganesha
Published on

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿಮೂರ್ತಿ ಕೂರಿಸುವುದಿಲ್ಲ ಎಂದು ಪೆಂಡಾಲ್ಗೆ ಅನುಮತಿ ನೀಡುವ ಮೊದಲೇ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಶ್ರದ್ಧಾಭಕ್ತಿಯಿಂದ ಆಚರಿಸುವ ಗೌರಿ ಗಣೇಶ ಹಬ್ಬದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಜನರು ಪಿಒಪಿ ಗಣಪತಿಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕೆಂದು ಗಣೇಶ ಉತ್ಸವ ಸಮಿತಿ ಮತ್ತು ಸಾರ್ವಜನಿಕರಿಗೆ ಷರತ್ತು ವಿಧಿಸಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90 ಜನರು ಮಣ್ಣಿನ ಗಣಪತಿ ಮೂರ್ತಿ ಪೂಜಿಸುತ್ತಾರೆ. ಆ ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಆದರಿಂದ ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net