ಪಂಚರಾಜ್ಯ ಚುನಾವಣೆ: ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ

BJP Congress
Published on

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ.

ಒಟ್ಟು 40 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 13ರಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್​ 13 ಸ್ಥಾನಗಳೊಂದಿಗೆ ಬಿಜೆಪಿಗೆ ಫೈಟ್​ ನೀಡುತ್ತಿದೆ. ಗೋವಾದಲ್ಲಿ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 21 ಸ್ಥಾನಗಳು ಬೇಕಿದೆ.

ಗೋವಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net