

ಮುಂಬೈ: ಆ.27ರಂದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಗುತ್ತಿಗೆದಾರ ಜೈದೀಪ್ ಅಪ್ಟೆ ಹಾಗೂ ಸ್ಟ್ರಕ್ಚರಲ್ ಕನ್ಸಲ್ಟೆಂಟ್ ಚೇತನ್ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಈ ಕೇಸ್ನಲ್ಲಿ ಇಂದು ಚೇತನ್ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಒಳಸಂಚು, ವಂಚನೆ, ಸಾರ್ವಜನಿಕ ಸುರಕ್ಷತೆಗೆ ಅಪಾಯವಿದೆ ಎಂಬ ಆರೋಪಗಳ ಜತೆಗೆ ಪ್ರತಿಮೆಯ ನಿರ್ಮಾಣ ಕಳಪೆ ಗುಣಮಟ್ಟದ್ದಾಗಿದ್ದು, ಅದರಲ್ಲಿ ಬಳಸಲಾದ ನಟ್ ಬೋಲ್ಟ್‌ಗಳು ತುಕ್ಕು ಹಿಡಿದಿರುವುದು ಕಂಡುಬಂದಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ನೀಡಿದ ದೂರಿನ ಮೇರೆಗೆ ಈ ಎಫ್‌ಐಆರ್ ದಾಖಲಿಸಲಾಗಿತ್ತು.
ಬಂಧಿತನಾಗಿರುವ ಆರೋಪಿ ಚೇತನ್ ಮೂಲತಃ ಕೊಲ್ಹಾಪುರದ ನಿವಾಸಿ ಎಂದು ಹೇಳಲಾಗಿದೆ. ಎಫ್‌ಐಆರ್ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ್ದ ಕೊಲ್ಲಾಪುರ ಅಪರಾಧ ದಳ ಮತ್ತು ಮಾಳವನ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಇಂದು ಮುಂಜಾನೆ ಚೇತನ್ನನ್ನು ಅರೆಸ್ಟ್ ಮಾಡಿದ್ದಾರೆ,(ಏಜೆನ್ಸೀಸ್).