

ಶ್ರೀನಿವಾಸಪುರ: ಪಟ್ಟಣ ಹೊರವಲಯದ ಖಾಸಗಿ ಕಾಲೇಜಿನ ವಸತಿ ನಿಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದ ಬಿಂದುಶ್ರೀ (17) ಮೃತೆ. ಸೋಮವಾರ ಬೆಳಗ್ಗೆ ಹಾಸ್ಟೆಲ್ನಿಂದ ತರಗತಿಗೆ ತೆರಳಿ ನಂತರ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಹಾಸ್ಟೆಲ್ಗೆ ಹಿಂದಿರುಗಿದ್ದು, ರೂಮಿನ ಬಂಕ್ಬೆಡ್ ಮಂಚಕ್ಕೆ ನೇಣು ಬಿಗಿದುಕೊಂಡಿದ್ದಾಳೆ.
ವಿದ್ಯಾರ್ಥಿನಿ 3 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಟನೆ ಕುರಿತು ಅನುಮಾನವಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪಾಲಕರು ಶ್ರೀನಿವಾಸಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿದು ಹಾಸ್ಟೆಲ್ಗೆ ಬಂದ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.