ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

sucide
Published on

ಬೆಂಗಳೂರು: ರಾಜಾಜಿನಗರದ ಬಳಿಯ ರಾಮಮಂದಿರ ಬಡಾವಣೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಿಯಾಂಕ (೧೯) ಮೃತ ದುರ್ದೈವಿ.

ರಾಮಮಂದಿರ ಬಡಾವಣೆ ನಿವಾಸಿ ಭರತ್‌ಕುಮಾರ್ ಎಂಬುವರ ಮಗಳಾದ ಪ್ರಿಯಾಂಕ, ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದಳು. ಭರತ್‌ಕುಮಾರ್, ಚಿನ್ನಾಭರಣ ವ್ಯಾಪಾರಿಯಾಗಿದ್ದಾರೆ.

ಶುಕ್ರವಾರ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಪ್ರಿಯಾಂಕ, ಟೆರೆಸ್‌ಗೆ ತೆರಳಿ ನೇಣು ಹಾಕಿಕೊಂಡಿದ್ದಾಳೆ. ಕೌಟುಂಬಿಕ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net