ಹೆಚ್ಚುತ್ತಿರುವ ಮಕ್ಕಳ ಆತ್ಮಹತ್ಯೆ!; ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ

Student
Published on

ಮುದ್ದೇಬಿಹಾಳ: ವಿದ್ಯಾರ್ಥಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇಂದು ಇನ್ನೊಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

ವಿಜಯಪುರ ಮೂಲದ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನ ವಿದ್ಯಾರ್ಥಿ ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ. ಈತ ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜಲ್ಲೇ ಈತನ ಶವ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಓದುವ ತೀವ್ರ ಒತ್ತಡ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net