ಚಲಿಸುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

Local Train
Published on

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ಚಲಿಸುವ ರೈಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಪ್ರಕರಣ ಸಂಬಂಧ 20 ವರ್ಷದ ಯುವತಿ ನೀಡಿದ ದೂರನ್ನು ಆಧರಿಸಿ ಪೊಲೀಸರು ರೈಲ್ವೆ ಸ್ಟೇಷನ್​ನಲ್ಲಿ ಕೂಲಿ ಆಗಿ ಕೆಲಸ ಮಾಡುತ್ತಿರುವ ನವಾಜ್​ ಕರಿಮ್ ಶೇಖ್​​(40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಯುವತ ಮೇಲೆ ಅತ್ಯಾಚಾರ ಪ್ರಕರಣ ಆಡಳಿತ-ವಿಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು ಪ್ರಕರಣದ ಕುರಿತು ಎನ್​ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್​ ಪಟೇಲ್​ ಪ್ರತಿಕ್ರಿಯಿಸಿದ್ದು ಚಲಿಸುತ್ತಿರುವ ರೈಲಿನ ಮಹಿಳಾ ಬೋಗಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ.

ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ವಿಚಾರವಾಗಿ ಹಲವಾರು ಪ್ರಶ್ನೆಗಳು ಉದ್ಭವಿಸುತ್ತಿದ್ದು, ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಎನ್​ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್​ ಪಟೇಲ್​ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net