ಪಾಲಕರಿಗೆ ತಿಳಿಸಿದ್ದೇ ತಪ್ಪಾಯ್ತಾ? ಮಂಡ್ಯದಲ್ಲಿ ಉಪನ್ಯಾಸಕನಿಗೆ ಲಾಂಗ್​ ತೋರಿಸಿ ಬೆದರಿಕೆ ಹಾಕಿದ ವಿದ್ಯಾರ್ಥಿ!

College Student
Published on

ಮಂಡ್ಯ: ಸರಿಯಾಗಿ ತರಗತಿಗೆ ಹಾಜರಾಗುತ್ತಿಲ್ಲ ಎಂದು ಪಾಲಕರಿಗೆ ತಿಳಿಸಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಯೊಬ್ಬ ಉಪನ್ಯಾಸಕನಿಗೆ ಲಾಂಗ್​ ತೋರಿಸಿ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಸಕ್ಕರೆ ನಾನು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ತರಗತಿಗೆ ನಿರಂತರವಾಗಿ ಗೈರಾಗುತ್ತಿದ್ದ ಬಗ್ಗೆ ಉಪನ್ಯಾಸಕ, ವಿದ್ಯಾರ್ಥಿಯ ಪಾಲಕರಿಗೆ ಮಾಹಿತಿ ನೀಡಿ, ಬುದ್ಧಿವಾದ ಹೇಳುವಂತೆ ಸಲಹೆ ನೀಡಿದ್ದರು. ಬಳಿಕ ಪಾಲಕರು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡರು.

ಇದರಿಂದ ಆಕ್ರೋಶಗೊಂಡು ಕಾಲೇಜಿಗೆ ಲಾಂಗ್ ತಂದಿದ್ದ ವಿದ್ಯಾರ್ಥಿ, ಲ್ಯಾಬ್​ನಲ್ಲಿದ್ದ ಉಪನ್ಯಾಸಕನಿಗೆ ಲಾಂಗ್ ತೋರಿಸಿ ಅವಾಜ್ ಹಾಕಿದ್ದಾನೆ. ಇದರಿಂದ ಉಪನ್ಯಾಸಕ ಸಹ ಒಂದು ಕ್ಷಣ ಗಾಬರಿಗೆ ಒಳಗಾದರು. ವಿದ್ಯಾರ್ಥಿಯನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೂ ವಿದ್ಯಾರ್ಥಿ, ಉಪನ್ಯಾಸಕನಿಗೆ ನಿಂದಿಸಿ, ಬೆದರಿಕೆ ಹಾಕಿದ್ದಾನೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದ್ದು, ವಿದ್ಯಾರ್ಥಿಯ ವರ್ತನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ, ತಪ್ಪೊಪ್ಪಿಗೆ ಬರೆಸಿಕೊಂಡು ಇನ್ಮುಂದೆ ಈ ರೀತಿ ಮಾಡದಂತೆ ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದಾರೆ. ಅಪ್ರಾಪ್ತನಾದ ಹಿನ್ನೆಲೆಯಲ್ಲಿ ಬಂಧಿಸದೇ ಬುದ್ಧಿ ಹೇಳಿ ಬಿಟ್ಟು ಕಳುಹಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net